24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

ಶಿಶಿಲ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ಆವರಣದಲ್ಲಿ ನ.7 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಶಿಶಿಲ ಗ್ರಾ. ಪಂಚಾಯತ್ ಅಧ್ಯಕ್ಷ ಸುಧೀನ್, ಶಿಶಿಲ ಪಂಚಾಯತ್ ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ, ಬಾಲಕೃಷ್ಣ ರೆಖ್ಯ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕುಶಾಲಪ್ಪ ಗೌಡ ಬದ್ರಿಜಾಲು ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು ಶೀನಪ್ಪ ನಾಯ್ಕ ವಂದಿಸಿದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya
error: Content is protected !!