April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA ಸುರತ್ಕಲ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.8 ರಂದು ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಶಿಬಿರದ ವಿಶೇಷತೆ: ಕಂಪ್ಯೂಟರೀಕೃತ ಕಣ್ಣಿನ ಉಚಿತ ತಪಾಸಣೆ ನಡೆಸಲಾಗುವುದು. 5ರಿಂದ 15 ವಯಸ್ಸಿನವರೆಗೆ ಕಣ್ಣಿನ ತೊಂದರೆ ಇರುವ ಮಕ್ಕಳಿಗೆ ಶಿಬಿರದ ಪ್ರಯುಕ್ತ ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುವುದು. ಶಿಬಿರದಲ್ಲಿ ಸಮೀಪ ದೃಷ್ಟಿ (Near Vision) ತೊಂದರೆಯವರಿಗೆ ಉಚಿತ ಕನ್ನಡಕವನ್ನು ವಿತರಿಸಲಾಗುವುದು. 15 ವಯಸ್ಸಿಗಿಂತ ಮೇಲ್ಪಟ್ಟು ದೂರದೃಷ್ಟಿ ಮತ್ತು ಸಮೀಪ ದೃಷ್ಟಿ ತೊಂದರೆ ಇರುವ ಅಗತ್ಯವುಳ್ಳವರಿಗೆ ಕನ್ನಡಕವನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುವುದು. ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಕಣ್ಣಿನ ಪೊರೆ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಾಗುವುದು. ಶಿಬಿರದಲ್ಲಿ ನೇತ್ರದಾನದ ಬಗ್ಗೆ ಮಾಹಿತಿ ನೀಡಲಾಗುವುದು.

Related posts

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya
error: Content is protected !!