28.1 C
ಪುತ್ತೂರು, ಬೆಳ್ತಂಗಡಿ
September 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಮಂಗಳೂರು ಗಣಿ ಇಲಾಖೆ ತಂಡ ದಾಳಿ ನಡೆಸಿದ್ದಾರೆ.

ದ.ಕ. ಜಿಲ್ಲಾ ಗಣಿ ಇಲಾಖೆಯ ಗಿರೀಶ್ ಮೋಹನ್ ನೇತೃತ್ವದ ತಂಡ ನ.6 ರಂದು ದಾಳಿ ನಡೆಸಿದ ವೇಳೆ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸಲಾಗುತ್ತಿದ್ದ ಸುಮಾರು 6 ಲಕ್ಷ ಮೌಲ್ಯದ ನಾಲ್ಕು ಬೋಟುಗಳನ್ನು ವಶಕ್ಕೆ ಪಡೆದಿದ್ದು ಸ್ಥಳದಲ್ಲಿ ಸಂಗ್ರಹಿಸಿದ್ದ ಮರಳಿನ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.ದ.ಕ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಗಿರೀಶ್ ಮೋಹನ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ , ಧರ್ಮಸ್ಥಳ ಗ್ರಾಮ ಆಡಳಿತಧಾರಿ ಪ್ರದೀಪ್ ಕುಮಾರ್ , ಗ್ರಾಮ ಸಹಾಯ ಹರೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya

ವೇಣೂರು : ಸುನಂದ ಪೂಜಾರಿ ನಿಧನ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!