September 6, 2026
Uncategorized

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಜಿರೆಯ ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನವೀನಕುಮಾರ್ ಜೈನ್ ಹಾಗೂ ವಿದ್ಯಾರ್ಥಿಗಳಾದ ಖುಷಿ ಗೌಡ , ಸೋನಾಕ್ಷಿ , ಸೀಮಾ ಹಾಗೂ ಕಾವ್ಯಾ ಅವರಿಂದ ರಸಾಯನ ಶಾಸ್ತ್ರದಲ್ಲಿ ಇಂದ್ರಜಾಲ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.

ಅವಿನಾಶ್ ಕಾಜೂರು ಅವರು ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜಿಯಾ ಉಪಸ್ಥಿತರಿದ್ದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಧನುಶ್ರೀ ಸ್ವಾಗತಿಸಿ , ಪಲ್ಲವಿ ವಂದಿಸಿದರು. ಶ್ರೇಯಾ ನಿರೂಪಿಸಿದರು.

Related posts

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಅರಿಕೆಗುಡ್ಡೆ ಕ್ಷೇತ್ರದಲ್ಲಿ ಅಭಿಮಾನಿಗಳ ವತಿಯಿಂದ ವಿಶೇಷ ಪೂಜೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya
error: Content is protected !!