ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ.

ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ ಮನೆಯ ಹತ್ತಿರ ಪ್ರತ್ಯೇಕ ಮನೆಯಲ್ಲಿ ವಾಸಮಾಡಿಕೊಂಡಿರುತ್ತಾರೆ. ಹರೀಶ್ ರ ತಮ್ಮನು ಸುಮಾರು ಎರಡು ವರ್ಷಗಳಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿದ್ದು ಇದಕ್ಕೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ.ಅಲ್ಲದೇ ಆತನು ಲಿವರ್ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಈ ಎಲ್ಲಾ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾದವನು 01 ತಿಂಗಳ ಹಿಂದೆ ಮಂಗಳೂರು ಪಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿರುತ್ತಾನೆ. ನ.07 ರಂದು ಬೆಳಿಗ್ಗೆ ಅವಧಿಯಲ್ಲಿ ಆತನಿಗಿದ್ದ ಮಾನಸಿಕ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜೀಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಯು ಡಿಆರ್ ನಂಬ್ರ: 24-2024 ಕಲಂ:194 BNSS ಪ್ರಕರಣ ದಾಖಲಾಗಿರುತ್ತದೆ.

Related posts

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದ್ರವಸಾರಜನಕ ಜಾಡಿಗಳ ವಿತರಣೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya
error: Content is protected !!