April 2, 2025
Uncategorized

ಬೈಕ್ ಕಳ್ಳತನ ಆರೋಪಿಯ ಬಂಧನ

ಬೆಳ್ತಂಗಡಿ : ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿ ಕಳ್ಳತನ ಮಾಡಿದ ಬೈಕ್ ಜೊತೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಶ್ರೇಷ್ಠ ಫಾರ್ನಿಚರ್ ಅಂಗಡಿ ಬಳಿ 20-09-2024 ರಂದು ನಿಲ್ಲಿಸಿದ್ದ ಬೈಕ್ ಕಳ್ಳತನ ನಡೆಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೈಕ್ ಮಾಲೀಕ ದೂರು ನೀಡಿದ್ದರು.

ಬೆಳ್ತಂಗಡಿ ಪೊಲೀಸರು ಬೈಕ್ ಕಳ್ಳತನ ಮಾಡಿದ ಬಗ್ಗೆ ತನಿಖೆ ನಡೆಸುತ್ತಿರುವಾಗ ನ.08 ರಂದು ಬೆಳ್ತಂಗಡಿಯ ಲಾಯಿಲ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಬೈಕ್ ನಲ್ಲಿ ಅನುಮಾನಸ್ಪದವಾಗಿ ವರ್ತಿಸುತ್ತಿದ್ದಾಗ ಬೈಕಿನ ದಾಖಲೆ ಪರಿಶೀಲನೆ ನಡೆಸಿದಾಗ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡುಬಂದಿದ್ದು ಈ ವೇಳೆ ಗುರುವಾಯನಕೆರೆಯಲ್ಲಿ ಕಳ್ಳತನ ಮಾಡಿದ ಬೈಕ್ ಮಾರಾಟ ಮಾಡಲು ಬಂದಿರುವ ಬಗ್ಗೆ ಬೈಕ್ ಸವಾರ ಬಾಯಿಬಿಟ್ಟಿದ್ದಾನೆ. ಪೊಲೀಸರು ಆರೋಪಿ ಸಮೇತ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಮುಕ್ರೆ ನಿವಾಸಿ ಅಣ್ಣು ಲಿಂಗಾಯಿತ ಮಗ ಯಾದವ(32) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಂಧಿಸಿದ್ದಾರೆ. ಕಳ್ಳತನ ಮಾಡಿದ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಮುರುಳೀಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ನೇತೃತ್ವದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!