22.1 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಚಾರ್ಮಾಡಿ : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ಧಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ಹೇಳಿದ್ದಾರೆ.

ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ- ವಹಿವಾಟು ಕೂಡ ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ. ಹೀಗಾಗಿ, ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ತಿಳಿಸಿದ್ದಾರೆ.

Related posts

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!