25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ


ಉಜಿರೆ: ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೆ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.


ನ.9 ರಂದು ಧರ್ಮಸ್ಥಳಕ್ಕೆ ಆಗಮಿಸಿದ ಕನ್ನಡ ಭುವನೇಶ್ವರಿ ರಥಕ್ಕೆ ಮಾಲಾರ್ಪಣೆ ಮಾಡಿ  ಗೌರವಿಸಿದ ಹೆಗ್ಗಡೆಯವರು ಗ್ರಾಮೀಣ ಪ್ರದೇಶವಾದ ಧರ್ಮಸ್ಥಳದಲ್ಲಿ ಅಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಡಾ. ಹಂಪನಾ ನೇತೃತ್ವದಲ್ಲಿ ೫೧ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿರುವುದನ್ನು ಧನ್ಯತೆಯಿಂದ ಸ್ಮರಿಸಿದರು.


ಕನ್ನಡ ಭುವನೇಶ್ವರಿ ರಥಯಾತ್ರೆ ಸುಗಮವಾಗಲಿ ಎಂದು ಹಾರೈಸಿದ ಹೆಗ್ಗಡೆಯವರು, ಕನ್ನಡ ಸಾಹಿತ್ಯ ಸಮ್ಮೇಳನವು ನಾಡು, ನುಡಿ ಮತ್ತು ಸಂಸ್ಕೃತಿ ಬಗ್ಯೆ ಅಭಿಮಾನ, ಅರಿವು ಹಾಗೂ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ಡಿ. ಹರ್ಷೇಂದ್ರ ಕುಮಾರ್, ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ದೇವಳ ಪಾರುಪತ್ಯಗಾರರಾದ ಲಕ್ಷಿö್ಮÃನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya
error: Content is protected !!