25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಐಐಟಿ/ಐಐಎಂ/ಐಐಎಸ್ ಸಿ/ಎನ್ ಐಟಿ/ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 1 ಲಕ್ಷದಿಂದ 2 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.


ಪಿಯುಸಿ ಪರೀಕ್ಷೆಯಲ್ಲಿ 95% ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್‌ಮೆಂಟ್ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ. ಸರ್ಕಾರದಿಂದ ಕಾಲೇಜು ಶುಲ್ಕವಾಗಿ ಪಾವತಿಸಲಾಗುತ್ತದೆ.

ಹಾಗೇ ಎಂಬಿಬಿಎಸ್‌ ಪದವಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂ. ಪ್ರೋತ್ಸಾಹ ಧನ ಮಂಜೂರು ಮಾಡುವ ಅಂಶವನ್ನು ಸೇರ್ಪಡೆ ಮಾಡಿ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

Related posts

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya
error: Content is protected !!