ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ7ರಂದು ಅಳದಂಗಡಿ ಸಮೀಪ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya
error: Content is protected !!