September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಚಾರ್ಮಾಡಿ : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ಧಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ಹೇಳಿದ್ದಾರೆ.

ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ- ವಹಿವಾಟು ಕೂಡ ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ. ಹೀಗಾಗಿ, ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ತಿಳಿಸಿದ್ದಾರೆ.

Related posts

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
error: Content is protected !!