ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಐಐಟಿ/ಐಐಎಂ/ಐಐಎಸ್ ಸಿ/ಎನ್ ಐಟಿ/ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 1 ಲಕ್ಷದಿಂದ 2 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.
ಪಿಯುಸಿ ಪರೀಕ್ಷೆಯಲ್ಲಿ 95% ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್‌ಮೆಂಟ್ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ. ಸರ್ಕಾರದಿಂದ ಕಾಲೇಜು ಶುಲ್ಕವಾಗಿ ಪಾವತಿಸಲಾಗುತ್ತದೆ.
ಹಾಗೇ ಎಂಬಿಬಿಎಸ್ ಪದವಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂ. ಪ್ರೋತ್ಸಾಹ ಧನ ಮಂಜೂರು ಮಾಡುವ ಅಂಶವನ್ನು ಸೇರ್ಪಡೆ ಮಾಡಿ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.