23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ)
ಬೆಳ್ತಂಗಡಿ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು.

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸಾತ್ವಿಕ್ ಭಟ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹನಾಗಿರುತ್ತಾನೆ.
ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಗಾನಪ್ರಿಯ ತೃತೀಯ ಸ್ಥಾನ, ಚಿತ್ರಕಲಾ ಸ್ಪರ್ಧೆಯಲ್ಲಿ ಲಾಜ್ಮೀಯ ತೃತೀಯ ಸ್ಥಾನ
ಪಡೆದಿರುತ್ತಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya
error: Content is protected !!