July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಐಐಟಿ/ಐಐಎಂ/ಐಐಎಸ್ ಸಿ/ಎನ್ ಐಟಿ/ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 1 ಲಕ್ಷದಿಂದ 2 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.


ಪಿಯುಸಿ ಪರೀಕ್ಷೆಯಲ್ಲಿ 95% ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್‌ಮೆಂಟ್ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ. ಸರ್ಕಾರದಿಂದ ಕಾಲೇಜು ಶುಲ್ಕವಾಗಿ ಪಾವತಿಸಲಾಗುತ್ತದೆ.

ಹಾಗೇ ಎಂಬಿಬಿಎಸ್‌ ಪದವಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂ. ಪ್ರೋತ್ಸಾಹ ಧನ ಮಂಜೂರು ಮಾಡುವ ಅಂಶವನ್ನು ಸೇರ್ಪಡೆ ಮಾಡಿ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

Related posts

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya
error: Content is protected !!