25.7 C
ಪುತ್ತೂರು, ಬೆಳ್ತಂಗಡಿ
September 20, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

ಕೊಕ್ಕಡ: ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಟ್ಟ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಎಂಬಲ್ಲಿ ಸರ್ಕಾರಿ ರಕ್ಷಿತಾರಣ್ಯದಿಂದ ವ್ಯಾಪಕವಾಗಿ ಮರಗಳ ಮಾರಣಹೋಮ ನಡೆಯುತ್ತಿದೆ ಎಂಬ ಗ್ರಾಮಸ್ಥರ ದೂರು ಮತ್ತು ಪತ್ರಿಕಾ ವರದಿಯ ಹಿನ್ನೆಲೆಯಲ್ಲಿ ಪತ್ತೆ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಪ್ರಕರಣವನ್ನು ಭೇದಿಸಿ, ಕಾಡಿನಿಂದ ಕಳವು ಮಾಡಲಾಗಿದ್ದ ಮರಗಳನ್ನು ಪತ್ತೆ ಮಾಡಲಾಗಿ ಮರಗಳನ್ನು ಕಡಿಯಲು ಉಪಯೋಗಿಸಿದ ಯಂತ್ರಗಳ ಸಹಿತ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದೆ.

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಮತ್ತು ಸಿಬ್ಬಂದಿಗಳ ತಂಡ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಸರಕಾರಿ ಅಧೀನದ ಕಾಡಿನಲ್ಲಿ ಮರುವ ಜಾತಿಯ 2 ಮರ, ಸರೋಳಿ ಜಾತಿಯ 2 ಮರ, ಚೇರೆ ಜಾತಿಯ-1 ಮರ ಮತ್ತು ಬನ್ಪು ಜಾತಿಯ 1 ಮರಗಳನ್ನು ಕಡಿದು ಸಾಗಾಟ ಮಾಡಿರುವುದನ್ನು ಪತ್ತೆ ಹಚ್ಚಿ ಈ ಪೈಕಿ ಬನ್ಪು ಮರದ 23 ಸೈಜುಗಳ ಸಹಿತ 1 ಮರ ಕತ್ತರಿಸುವ ಯಂತ್ರವನ್ನು ವಶಕ್ಕೆ ಪಡೆದುಕೊಂಡು ಆರೋಪಿ ಕಡಬ ತಾಲ್ಲೂಕು ಶಿರಾಡಿ ಗ್ರಾಮದ ಬಾಗಿಲುಗದ್ದೆ ಮನೆ ನಿವಾಸಿ ಪ್ರಕಾಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದೆ.

ಆರೋಪಿ ಪ್ರಕಾಶ್ ಬಂಧಿಸಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಯತೀಂದ್ರ ಕುಮಾರ್, ಗಸ್ತು ಅರಣ್ಯ ಪಾಲಕರಾದ ಸುನಿಲ್ ನಾಯ್ಕ, ಶಿವಾನಂದ ಕುದರಿ, ಜೀಪು ಚಾಲಕ ಕಿಶೋರ್ ಕುಮಾರ್ ಭಾಗವಹಿಸಿದ್ದರು.

Related posts

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕೊಯ್ಯೂರು : 39 ನೇ ವರ್ಷದ ಶ್ರೀ ಕೃಷ್ಣ ಜನ್ಮಷ್ಟಾಮಿ, ಆಟೋಟ ಸ್ಪರ್ಧೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya
error: Content is protected !!