26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

ಬೆಳ್ತಂಗಡಿ: ಮಂಡಲಗಳ ಪ್ರವಾಸ ನಿಮಿತ್ತ ಜಿಲ್ಲಾ ಮಹಿಳಾ ಮೋರ್ಚಾದ ತಂಡವು ನ.11 ರಂದು ಬೆಳ್ತಂಗಡಿ ಮಂಡಲದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಭೇಟಿಯನ್ನು ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಮಹಿಳಾಮೋರ್ಚಾದ ಅಧ್ಯಕ್ಷೆ ಶ್ರೀಮತಿ ಮಂಜುಳಾ ರಾವ್, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಿಖಿತಾ ಶೆಟ್ಟಿ , ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಪ್ರಭಾರಿ ಶ್ರೀಮತಿ ಬಬಿತ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಯಶಸ್ವಿನಿ ಮತ್ತು ಶ್ರೀಮತಿ ಅಮಿತಾ ಉಪಸ್ಥಿತರಿದ್ದರು.

ಸಭೆಯಲ್ಲಿ ಮಾತನಾಡಿದ ಮಂಜುಳಾ ರಾವ್ ರವರು ಬೆಳ್ತಂಗಡಿ ಮಹಿಳಾ ಮೋರ್ಚಾದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಎಲ್ಲಾ ಪದಾಧಿಕಾರಿಗಳು ಸಕ್ರಿಯ ಸದಸ್ಯರಾಗಲೇಬೇಕು. ಈ ನಿಟ್ಟಿನಲ್ಲಿ ಜಾಗೃತರಾಗಿ ಮಹಿಳಾ ಸದಸ್ಯರು ಇನ್ನುಳಿದ ಎರಡು ದಿನಗಳನ್ನು ಸರಿಯಾಗಿ ಉಪಯೋಗಿಸಿಕೊಂಡು ಕೆಲಸ ಮಾಡಿ ಎಂದರು.

ಮಂಡಲ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸರವರು ಮಾತನಾಡಿ ಎಲ್ಲಾ ಸದಸ್ಯರು ಸದಸ್ಯತ್ವ ಕಾರ್ಯದಲ್ಲಿ ತೊಡಗಿಸಿಕೊಂಡು ಯಾವುದೇ ಜವಾಬ್ದಾರಿಯನ್ನು ಒಗ್ಗಟ್ಟಿನಿಂದ ನಿರ್ವಹಿಸುವ ಎಂದು ಹೇಳಿದರು. ಬೆಳ್ತಂಗಡಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು.

ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ಜಯಂತ್ ಧನ್ಯವಾದ ಸಮರ್ಪಿಸಿದರು.

Related posts

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ದಸರಾ ಕವಿಗೋಷ್ಠಿ-2025ರಲ್ಲಿ ವಸಂತಿ ಟಿ. ನಿಡ್ಲೆ

Suddi Udaya
error: Content is protected !!