25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

ಬೆಳ್ತಂಗಡಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ ಭಾಗವಹಿಸಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ದಾಖಲೆಯ ಮತಗಳ ಅಂತರಗಳಿಂದ ಆಶೀರ್ವದಿಸಬೇಕೆಂದು ಕಿಶೋರ್ ಕುಮಾರ್ ಅವರು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಬಂಗಾರು ಹನುಮಂತು, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ , ರಾಮುಲು , ಅರಗ ಜ್ಞಾನೇಂದ್ರ , ಶಾಸಕ ಡಾ. ಎಂ ಚಂದ್ರಪ್ಪ , ರಾಜ್ಯ ಕಾರ್ಯದರ್ಶಿ ದಿವಾಕರ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ಉಜಿರೆ ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ: ಬಿಜೆಪಿ 7 – ಕಾಂಗ್ರೆಸ್ 5, ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya
error: Content is protected !!