26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

ಸಂಡೂರು :ರಾಜ್ಯದಲ್ಲಿ ಉಪಚುನಾವಣೆಯ ಕಾವೇರಿತ್ತಿರುವಂತೆ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿರುವ ಅವರು, ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿ ಬಂಗಾರು ಹನುಮಂತ ಅವರನ್ನು ಕಣಕ್ಕಿಳಿಸಿದೆ. ನಮ್ಮೆಲ್ಲರ ಹಿರಿಯ ನಾಯಕರಾಗಿರುವ ಬಿ.ಎಸ್ ಯಡಿಯೂರಪ್ಪ ನವರು, ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರೂ ಸೇರಿದಂತೆ ರಾಜ್ಯ ಮಟ್ಟದ ನಾಯಕರು ಸಂಡೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರುವ ಮಠ ಮಂದಿರಗಳನ್ನು ವಕ್ಫ್ ಆಸ್ತಿ ಎಂದು ದಾಖಲೆ ನಿರ್ಮಿಸಲಾಗಿದೆ. ಅಲ್ಪಸಂಖ್ಯಾತ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ತಲತಲಾಂತರಗಳಿಂದ ಕೃಷಿಭೂಮಿಯನ್ನೇ ನಂಬಿಕೊಂಡಿರುವ ರೈತರ ಬೆನ್ನಿಗೆ ಚೂರಿ ಹಾಕುವ‌ ಕೆಲಸ ಮಾಡಲಾಗುತ್ತಿದೆ. ರೈತರ ಕೃಷಿ ಜಮೀನಿನ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸುವ ಮೂಲಕ ಅನ್ನದಾತರನ್ನು ಶೂಲಕ್ಕೇರಿಸುವ ಪ್ರಯತ್ನವನ್ನು ಖುದ್ದು ಸರಕಾರವೇ ಮಾಡುತ್ತಿರುವುದು ಈ ನಾಡಿನ ಜನತೆಯ ದೌರ್ಭಾಗ್ಯ ಎಂದು ಕಿಶೋರ್ ಕುಮಾರ್ ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಆಮಿಷಗಳಿಗೆ ಮನಸೋತು ಮತ ನೀಡಿದ್ದ ಜನತೆ ಇಂದು ಪರಿತಪಿಸುವಂತಾಗಿದೆ. ಹರಗಣಗಳ ಸರಪಳಿ ಕೊನೆಯಿಲ್ಲದಂತೆ ಬೆಳೆಯುತ್ತಿದೆ. ದಲಿತ ಸಮಾಜದ ಅಭಿವೃದ್ಧಿಗಾಗಿ ಇರುವ ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಕೊಳ್ಳೆಹೊಡೆಯುವ ಮೂಲಕ ದಲಿತ ಸಮಾಜದ ಬೆನ್ನಿಗಿರಿಯುವ ಹೀನ ಕೃತ್ಯ ವೆಸಗಿದೆ. ಈ ಎಲ್ಲಾ ದುಷ್ಕೃತ್ಯಗಳಿಗೆ ಈ ಮೂರು ಉಪ ಚುನಾವಣೆಯಲ್ಲಿ ಜನತೆ ಉತ್ತರ ನೀಡಲಿದ್ದಾರೆ. ಕಾಂಗ್ರೆಸ್ ಸರಕಾರದ ಶವ ಪೆಟ್ಟಿಗೆಯ ಮೊದಲ ಮೊಳೆ ಸಂಡೂರಿನಲ್ಲೇ ಹೊಡೆಯಲಿದ್ದಾರೆ ಎಂದು ಹೇಳಿದ್ದಾರೆ.

Related posts

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya
error: Content is protected !!