September 6, 2026
Uncategorized

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

ಚಿಕ್ಕಮಗಳೂರು : ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ.

ಮಲೆನಾಡಿನಲ್ಲಿ ಒತ್ತುವರಿ ತೆರವು ಗುಮ್ಮ, ಕಸ್ತೂರಿ ರಂಗ್ ವರದಿ ಭಯದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಗ್ರಾಮಸ್ಥರ ಸಂಪರ್ಕ ಮಾಡುತ್ತಿರುವ ಕೆಂಪು ಉಗ್ರರ ಬಗ್ಗೆ ಪೊಲೀಸರು ಜಾಡು ಹಿಡಿದಿದ್ದಾರೆ ಎನ್ನಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸರು ಹಾಗೂ ಎ.ಎನ್.ಎಫ್ ಪೊಲೀಸರು ನಕ್ಸಲ್ ಬೆಂಬಲಿಗರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜ್ಯ ಗುಪ್ತಚರ ಮಾಹಿತಿ ಆಧಾರದಲ್ಲಿ ನಕ್ಸಲ್ ಬೆಂಬಲಿಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ‌‌.

ಕಳೆದ ಎರಡು ದಿನದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಓರ್ವ ವ್ಯಕ್ತಿಯನ್ನು ಭೇಟಿಯಾಗಲು ಬಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗಡಿಭಾಗದ ಇಬ್ಬರು ಶಂಕಿತ ವ್ಯಕ್ತಿಗಳ ಬಗ್ಗೆ ರಾಜ್ಯ ಗುಪ್ತಚರ ಇಲಾಖೆಗೆ ಬಂದ ಖಚಿತ ಮಾಹಿತಿ ಆಧಾರದಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು. ಇಬ್ಬರಿಗೆ ಸಂಬಂಧಿಸಿದ ಸ್ಥಳದಲ್ಲಿ ಶೋಧ ನಡೆಸಿ ನಾಡ ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಕಾರ್ಕಳ ಎ.ಎನ್.ಎಫ್‌ ಎಸ್ಪಿ ಹಾಗೂ ಚಿಕ್ಕಮಗಳೂರು ಎಸ್ಪಿ ನೇತೃತ್ವದ ತಂಡದ ಪೊಲೀಸರು ನಕ್ಸಲರಿಗೆ ಮಾಹಿತಿ ಹಾಗೂ ಸಹಕಾರ ಹಿನ್ನಲೆಯಲ್ಲಿ ಇಬ್ಬರು ಶಂಕಿತರಿಗೆ ಸಂಬಂಧಿಸಿದ ಸ್ಥಳದಲ್ಲಿ ಶೃಂಗೇರಿ ಪೊಲೀಸ್ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Related posts

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya
error: Content is protected !!