29.5 C
ಪುತ್ತೂರು, ಬೆಳ್ತಂಗಡಿ
April 4, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

ಪುಂಜಾಲಕಟ್ಟೆ ನ. 6: ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ವರ್ಷದ ಕಬಡ್ಡಿ ಪಂದ್ಯಾಟ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್‌ ಸಹಭಾಗಿತ್ವದಲ್ಲಿ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ ನ.16 ಮತ್ತು ನ.17ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ಲಬ್‌ನ ಗೌರವಾಧ್ಯಕ್ಷ ಎಂ. ತುಂಗಪ್ಪ ಬಂಗೇರ ತಿಳಿಸಿದ್ದಾರೆ.

ಪಂದ್ಯಾಟದಲ್ಲಿ ವಿವಿಧ ಐದು ವಿಭಾಗದಲ್ಲಿ ಪ್ರೊ ಮಾದರಿಯ ಮ್ಯಾಟ್ ಕಬಡ್ಡಿ ನಡೆಯಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ವಿಭಾಗ, ಕಾಲೇಜು ವಿಭಾಗ ಮತ್ತು ಅಂತಾರಾಜ್ಯ ಮಟ್ಟದ 55 ಕೆಜಿ ಹಾಗೂ 65 ಕೆ.ಜಿ. ವಿಭಾಗದ ಪುರುಷರ ಕಬಡ್ಡಿ ಪಂದ್ಯಾಟ ನಡೆಯಲಿದೆ. ಕೆಜಿ ವಿಭಾಗದ ಪ್ರಥಮ ಸ್ಥಾನಿ ವಿಜೇತ ತಂಡದ ಆಟಗಾರರಿಗೆ ಚಿನ್ನದ ಪದಕ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಹಾಗೂ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya
error: Content is protected !!