ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ ವತಿಯಿಂದ ಜ್ಞಾನ ದೀಪ ಶಾಲಾ ಶಿಕ್ಷಣ ಕಾಯ೯ಕ್ರಮದಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ಗಳ ವಿತರಣೆ ಹಾಗೂ ಉಜಿರೆಯ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ರೂ.46.65 ಲಕ್ಷದ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳ ಹಸ್ತಾಂತರ ಕಾರ್ಯಕ್ರಮವು ನ.12 ರಂದು ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆಯಿತು.


ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ ವಿವಿಧ ತಾಲೂಕುಗಳ 507 ಶಾಲೆಗಳಿಗೆ 4,044 ಜೊತೆ ಡೆಸ್ಕ್‌-ಬೆಂಚ್ ಗಳ ಹಸ್ತಾಂತರಕ್ಕೆ ಚಾಲನೆ ನೀಡಿದರು.


ನಂತರ ಉಜಿರೆಯ ಘನತ್ಯಾಜ್ಯಗಳ ಸಾಗಾಟಕ್ಕೆ ಕ್ಷೇತ್ರದ ವತಿಯಿಂದ ಮಂಜೂರು ಮಾಡಿದ ಸಾಗಾಟ ವಾಹನ ಹಾಗೂ ಯಂತ್ರೋಪಕರಣಗಳ ಕೀಯನ್ನು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಕೆ. ಅವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೆಂಕಟೇಶ್ ಸುಬ್ರಾಯ ಪಟಗಾರ್, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಕೆ , ಧಮ೯ಸ್ಥಳ ಗ್ರಾ.ಪಂ ಅಧ್ಯಕ್ಷೆ ವಿಮಲಾ, ತಾ.ಪಂ ಕಾಯ೯ನಿವಾ೯ಧಿಕಾರಿ ಭವಾನಿ ಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತುಳಪುಳೆ, ಯೋಜನೆಯ ಹಣಕಾಸು ಅಧಿಕಾರಿ ಶಾಂತಾರಾಮ್ ಪೈ, ಲಕ್ಷ್ಮೀ ಗ್ರೂಪ್ ನ ಮೋಹನ್ ಕುಮಾರ್, ಉಜಿರೆ ಚಿನ್ಮಯಿಯ ಅಶ್ವಥ್ ಉಪಸ್ಥಿತರಿದ್ದರು.

ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ ಪ್ರಸ್ತಾವಿಕ ಮಾತನಾಡಿ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ ವಿವಿಧ ತಾಲೂಕುಗಳ 507 ಶಾಲೆಗಳಿಗೆ 4,044 ಜೊತೆ ಡೆಸ್ಕ್‌-ಬೆಂಚ್ ಗಳನ್ನು ವಿತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ ಒಟ್ಟು ರೂ. 2.75 ಕೋಟಿ ಮೊತ್ತ ವಿನಿಯೋಗಿಸಲಾಗುತ್ತಿದೆ. ಇದರಿಂದಾಗಿ ಸುಮಾರು 20,220 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.ಘನತ್ಯಾಜ್ಯಗಳ ಸಾಗಾಟಕ್ಕೆ ವಾಹನ ಹಾಗೂ ಯಂತ್ರೋಪಕರಣಗಳ ಒದಗಿಸುವಂತೆ ದ.ಕ.ಜಿಲ್ಲಾ ಪಂಚಾಯತ್ ಡಾ|| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮನವಿ ಮಾಡಿದಂತೆ ರೂ. 46.65 ಲಕ್ಷದ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳಿಗೆ ಮಂಜೂರಾತಿಯನ್ನು ನೀಡಿರುತ್ತಾರೆ ಎಂದರು.


ಸುಮಂಗಲಾ ಹಾಗೂ ರಾಜೇಶ್ವರಿ ಇವರ ಪ್ರಾಥ೯ನೆ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ನಿರ್ದೇಶಕ ಶಿವಾನಂದ ಕಾಯ೯ಕ್ರಮ ನಿರೂಪಿಸಿದರು.

Leave a Comment

error: Content is protected !!