24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೇಬಲ್ ಟ್ರಸ್ಟ್ ಆಗಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರ, ಮಹಿಳೆಯರ, ಬಡವರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಅಲ್ಲದೆ ಗ್ರಾಮಾಭಿವೃದ್ಧಿ ಯೋಜನೆಯು ದೇಶದಲ್ಲಿ ಅತೀ ದೊಡ್ಡ ಬಿ.ಸಿ. ಸಂಸ್ಥೆಯಾಗಿ ಗ್ರಾಮೀಣ ಪ್ರದೇಶದಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ ಉತ್ತಮ ಆರ್ಥಿಕ ಶಿಸ್ತನ್ನು ಮೂಡಿಸಿ ದೇಶದ ಪ್ರಮುಖ ಬ್ಯಾಂಕ್‌ಗಳಿಂದ ನೇರವಾಗಿ ಆರ್ಥಿಕ ಸಾಲ ಸೌಲಭ್ಯದ ವ್ಯವಸ್ಥೆಯನ್ನು ಬಿ.ಸಿ. ಮಾದರಿಯಲ್ಲಿ ದೊರಕಿಸಿಕೊಂಡು ಬಂದಿರುತ್ತದೆ.

ಯೋಜನೆಯು ಸಂಘದ ಸದಸ್ಯರಲ್ಲಿ ಉಳಿತಾಯದ ಮನೋಭಾವನೆಯನ್ನು ಬೆಳೆಸುವುದಲ್ಲದೆ ಆ ಉಳಿತಾಯದ ಆಂತರಿಕ ನಿಧಿಯನ್ನು ಸಂಘದ ಆಂತರಿಕ ಸಾಲಕ್ಕೆ ಬಳಸಿಕೊಳ್ಳುವ ಮಹತ್ತರ ವ್ಯವಸ್ಥೆಯನ್ನು ಬಿ.ಸಿ. ವ್ಯವಸ್ಥೆಯಲ್ಲಿ ಕಲ್ಪಿಸಿಕೊಟ್ಟಿದೆ. ಈ ವ್ಯವಸ್ಥೆಯಿಂದ ಸಂಘಗಳಿಗೆ ಆದಾಯ ಬರುತ್ತಿದ್ದು ಆ ಆದಾಯವು ಸಂಘದ ಲಾಭಾಂಶವಾಗಿ ಪರಿವರ್ತನೆಯಾಗುತ್ತಿದೆ. ಈ ಲಾಭಾಂಶದಲ್ಲಿ ಸಾಮಾನ್ಯವಾಗಿ ಪ್ರತಿ ಮೂರು ವರ್ಷಗಳಿಗೊಮ್ಮೆ ಒಂದಿಷ್ಟು ನಿಗದಿತ ಪ್ರಮಾಣದಷ್ಟು ಲಾಭಾಂಶವನ್ನು ಅರ್ಹ ಸಂಘಗಳಿಗೆ ವಿತರಿಸಲಾಗುತ್ತಿದೆ. ಹಿಂದಿನ ಸಾಲಿನಲ್ಲಿ ಅಂದರೆ 2021ರಲ್ಲಿ ಅರ್ಹ ಸ್ವಸಹಾಯ ಸಂಘಗಳಿಗೆ ಲಾಭಾಂಶವನ್ನು ವಿತರಿಸಲಾಗಿತ್ತು.

ಈ ಸಾಲಿನಲ್ಲಿ ಸುಮಾರು 600 ಕೋಟಿ ರೂಪಾಯಿಗೂ ಹೆಚ್ಚು ಲಾಭಾಂಶವನ್ನು ಅರ್ಹ ಸಂಘಗಳಿಗೆ ವಿತರಿಸುತ್ತಿರುವುದು ಒಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಈ ಬೃಹತ್ ಪ್ರಮಾಣದ ಲಾಭಾಂಶ ವಿತರಣಾ ಕಾರ್ಯಕ್ರಮವು ನ.14 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್‌ರವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂ ರಾವ್‌ರವರು ಭಾಗವಹಿಸಲಿದ್ದಾರೆ. ನಬಾರ್ಡ್ ಬ್ಯಾಂಕ್ ಅಧ್ಯಕ್ಷ ಶಾಜಿ. ಕೆ.ವಿ. ಮುಂಬೈ, ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ತಾಲೂಕು ಶಾಸಕ ಹರೀಶ್ ಪೂಂಜಾರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್.ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!