23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ವಿಶ್ವ ಡಯಾಬಿಟಿಕ್ ದಿನದ ನಿಮಿತ್ತ “ಔಷಧವಾಗಿ ಆಹಾರ” ಕಾರ್ಯಾಗಾರವನ್ನು ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ಮತ್ತು ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಸಹಯೋಗದಲ್ಲಿ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್. ಬಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ನೈಸರ್ಗಿಕ ಚಿಕಿತ್ಸೆ ಮತ್ತು ಪೌಷ್ಠಿಕತೆಯ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಪೋಷಕರಿಗೆ ತಮ್ಮ ಆರೋಗ್ಯ ಹಾಗೂ ಮಕ್ಕಳ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಉಚಿತವಾಗಿ ಡಯಾಬಿಟಿಕ್ ತಪಾಸಣೆ, ರಕ್ತದೊತ್ತಡ ತಪಾಸಣೆ, ದೇಹತೂಕ ಮೌಲ್ಯಮಾಪನ ಹಾಗೂ ಆಹಾರ ಸಲಹೆ ನೀಡಲಾಯಿತು.

ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಕಾರ್ಯಕ್ರಮ ನಿರೂಪಿಸಿ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ಶಿಕ್ಷಕಿ ಜಿಜಿ ಜೋಸ್ ವಂದಿಸಿದರು.

Related posts

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya
error: Content is protected !!