33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

ಬೆಳ್ತಂಗಡಿ : ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಮಕ್ಕಳ ಆರೋಗ್ಯ ,ನೈರ್ಮಲ್ಯ , ಮತ್ತು ಹಕ್ಕು ಸಂರಕ್ಷಣೆಯ ಹಿತದೃಷ್ಟಿಯಿಂದ ದಕ್ಷಿಣಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸರಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಶೌಚಾಲಯಗಳನ್ನು ಸ್ವಯಂ ಪ್ರೇರಿತ ಶ್ರಮದಾನದ ಮೂಲಕ ಶುಚಿತ್ವ ಮತ್ತು ದುರಸ್ತಿಗೊಳಿಸಿ ನವೀಕರಿಸಿ ಸ್ವಚ್ಛಾಲಯಗಳನ್ನಾಗಿ ಪರಿವರ್ತಿಸುವ ವಿನೂತನ ಪರಿಕಲ್ಪನೆಯೊಂದಿಗೆ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.


ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸರಿಸುಮಾರು 1000ಕ್ಕೂ ಹೆಚ್ಚಿನ ಎಲ್ಲಾ ಸರಕಾರಿ ಪ್ರಾಥಮಿಕ ಶಾಲೆಗಳ ಶೌಚಾಲಯಗಳನ್ನು “ಸ್ವಚ್ಛಾಲಯ”ಗಳನ್ನಾಗಿ ಪರಿವರ್ತಿಸುವ ಮೂಲಕ ಬಡಮಕ್ಕಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ನೆರವಾಗುವುದು ಈ ಅಭಿಯಾನದ ಸದುದ್ದೇಶ. ಇದೀಗ ಬೆಳ್ತಂಗಡಿ ತಾಲೂಕಿನಲ್ಲೂ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ಮುಗುಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪರಿವರ್ತಿತ ಸ್ವಚ್ಛಾಲಯಗಳ ಉದ್ಘಾಟನಾ ಸಮಾರಂಭವನ್ನು ಶಾಲೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮವು ರಾಜಕೇಸರಿ ಸಂಸ್ಥೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುಟಾಣಿ ಮಕ್ಕಳಿಂದಲೇ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಲಾಯಿತು.
ರಾಜಕೇಸರಿ ಟ್ರಸ್ಟ್ ನ ಜಿಲ್ಲಾಧ್ಯಕ್ಷ ಸಂತೋಷ್ ಕೊಲ್ಯ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಚ್ಛಾಲಯ ಅಭಿಯಾನದ ಸದುದ್ದೇಶ ಮತ್ತು ಕಾರ್ಯಯೋಜನೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಂಡಿದ್ದ ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರಾದ ಪೃಥ್ವಿ ಸಾನಿಕಂ ರವರು ಅಭಿಯಾನದ ಸದುದ್ದೇಶ ಮತ್ತು ಮಹತ್ವವನ್ನು ಅರಿತು ಎಲ್ಲಾ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.


ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಉಜಿರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಇಲ್ಲಿಯವರೆಗೆ ಯಾರೂ ಗಮನಹರಿಸದ ಉತ್ತಮ ಕಾರ್ಯಕ್ಕೆ ರಾಜ ಕೇಸರಿ ಟ್ರಸ್ಟ್ ಮುಂದಾಗಿರುವುದು ಶ್ಲಾಘನೀಯ ಮತ್ತು ಅಭಿಯಾನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸಂತಸ ವ್ಯಕ್ತ ಪಡಿಸಿದರು.


ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಂತ್ರದೇವತೆ ಸಾನಿಧ್ಯ ಕ್ಷೇತ್ರ ಕಟ್ಟೆಮಾರ್ ಇದರ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ರವರು ಅಭಿಯಾನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಇಂತಹ ಸಮಾಜಮುಖಿ ಅಭಿಯಾನಗಳು ಇತರರಿಗೂ ಪ್ರೇರಣೆಯಾಗಲಿ ಎಂದು ಹಾರೈಸಿ ಈ ಸತ್ಕಾರ್ಯದಲ್ಲಿ ನಾವೂ ರಾಜ ಕೇಸರಿಯೊಂದಿಗೆ ಕೈ ಜೋಡಿಸುವುದಾಗಿ ತಿಳಿಸಿದರು.

ಖ್ಯಾತ ನ್ಯಾಯವಾದಿಗಳು ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಬಿ . ಕೆ ಧನಂಜಯ ರಾವ್ ರವರು ಸರಕಾರಿ ಶಾಲೆಗಳ ಉಳಿವಿಗಾಗಿ ನಾವೆಲ್ಲರೂ ಶ್ರಮಿಸಬೇಕು ಮತ್ತು ದಾನಿಗಳು ಹಾಗೂ ಸಂಘ-ಸಂಸ್ಥೆಗಳು ಕಲ್ಪಿಸಿಕೊಟ್ಟ ಉತ್ತಮ ಸೌಲಭ್ಯಗಳನ್ನು ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದದವರು ಅಚ್ಚುಕಟ್ಟಾಗಿ ನಿರ್ವಹಿಸುವಲ್ಲಿ ಶ್ರಮವಹಿಸಬೇಕು ಎಂದರು. ಮನೋಹರ್ ಬಳಂಜ ರವರು ಮಾತನಾಡಿ ಶಾಲೆಗಳಲ್ಲಿ ಉತ್ತಮ ವ್ಯವಸ್ಥೆಗಳನ್ನು ಕಲ್ಪಿಸುವಲ್ಲಿ ಇಂತಹ ಸಮಾಜಮುಖಿ ಚಿಂತನೆಯ ಅಭಿಯಾನಗಳು ದೊಡ್ಡ ಮಟ್ಟದಲ್ಲಿ ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಬೆಳ್ತಂಗಡಿ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ತುಳುಪುಳೆರವರು ಬಡ ಮಕ್ಕಳ ಆರೋಗ್ಯದ ಹಿತದಷ್ಟಿಯಿಂದ ಶೌಚಾಲಯಗಳ ಶುಚಿತ್ವ ಮತ್ತು ದುರಸ್ತಿ ಕಡೆಗೆ ಗಮನಹರಿಸಿ ಯೋಜನೆ ರೂಪಿಸಿದ್ದು ಸಂಸ್ಥೆಯ ನಿಸ್ವಾರ್ಥ ಸೇವಾ ಮನೋಭಾವನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಣ್ಣಿಸಿದರು.
557 – 558 ಸೇವಾ ಯೋಜನೆಯ ಅಂಗವಾಗಿ ದೀಪಕ್ ಜಿ ಬೆಳ್ತಂಗಡಿ ಯವರ ನೇತೃತ್ವದಲ್ಲಿ ರಾಜಕೇಸರಿ ಬೆಳ್ತಂಗಡಿ ಘಟಕದ ವತಿಯಿಂದ ಶಾಲೆಗೆ ಅಗತ್ಯವಾಗಿ ಬೇಕಾಗಿದ್ದ ಗೋದ್ರೆಜ್ ಕಪಾಟು ಮತ್ತು ಪ್ಲಾಸ್ಟಿಕ್ ಕುರ್ಚಿಗಳನ್ನು ಸೇವಾ ರೂಪದಲ್ಲಿ ಹಸ್ತಾಂತರಿಸಲಾಯಿತು.


ಬಂಟ್ವಾಳ ಘಟಕದ ಅಧ್ಯಕ್ಷ ಗೌತಮ್ ಪೂಜಾರಿ ನೆಲ್ಲಿಗುಡ್ಡೆ ಮತ್ತು ಬಸವನಬೈಲು ಘಟಕದ ಅಧ್ಯಕ್ಷ ರವಿರಾಜ್ ನೆಲ್ಲಿಗುಡ್ಡೆ, ರಾಜ ಕೇಸರಿ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸ್ವಚ್ಚತಾ ಶ್ರಮದಾನದಲ್ಲಿ ಪಾಲ್ಗೊಂಡ ಸಂಸ್ಥೆಯ ಸದಸ್ಯರನ್ನು ಶಾಲೆಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.


ಶಾಲೆಯ ಹಳೇ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ಪೋಷಕರ ಸಂಘದ ಪದಾಧಿಕಾರಿಗಳು, ಸದಸ್ಯರು, ಶಿಕ್ಷಕ ವೃಂದದವರು ಮತ್ತು ಶಾಲೆಯ ಮಕ್ಕಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಗೌರವಾಧ್ಯಕ್ಷ ಪ್ರೇಮ್ ರಾಜ್ ರೋಷನ್ ಸಿಕ್ವೇರಾ ನಿರೂಪಿಸಿದರು. ರಾಜಕೇಸರಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ ಧನ್ಯವಾದವಿತ್ತರು.

Related posts

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya
error: Content is protected !!