September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಉಜಿರೆ: “ಸಾಂಪ್ರದಾಯಿಕ ಆಚರಣೆಗಳ ಅರಿವು ವಿದ್ಯಾರ್ಥಿಗಳಿಗೆ ಬಹುಮುಖ್ಯ” ಎಂದು ಉಜಿರೆ ರತ್ನಮಾನಸದ ಪ್ರಧಾನ ನಿಲಯಪಾಲಕರಾದ ಯತೀಶ್ ಕೆ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಆಚರಿಸಿದ ದೀಪಾವಳಿ ಆಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮೌಲ್ಯಾಧಾರಿತ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಆಚರಣೆಗಳಾದ ನರಕ ಚತುರ್ದಶಿ, ಗೋ ಪೂಜೆ, ಬಲಿಯೇಂದ್ರ ಪೂಜೆ, ಲಕ್ಷ್ಮೀ ಪೂಜೆ ಹಾಗೂ ತುಳಸಿ ಪೂಜೆ ಮಾಡಿ ಗುಂಪುಗಾಯನ ಹಾಗೂ ನೃತ್ಯ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ನಿಹಾ ಹಾಗೂ ಧೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಹೃತಿಕ್ ಪ್ರಸಾದ್ ಹಾಗೂ ಅಭೀಶ್ ವಂದಿಸಿದರು.

Related posts

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!