24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.


ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರಾಗಿದ್ದು, ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.
ನ.13ರಂದು ದಿಢೀರ್ ಆಗಮಿಸಿದ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ. ಈಗ ಸೂರು ಕಳೆದುಕೊಂಡಿರುವ ವೃದ್ಧ ದಂಪತಿ ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ ಇಲ್ಲವೇ ಇಲ್ಲಿಯೇ ಪ್ರಾಣಬಿಡುತ್ತೇವೆ ಎಂದಿದ್ದಾರೆ.

Related posts

ಇಳಂತಿಲ : ಸಂವಿಧಾನ ಜಾಗೃತಿ ಜಾಥಾ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!