April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

ಕಲ್ಮಂಜ : ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿಯ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನದ ವಿವಿಧ ಮಾದರಿಗಳ ಪ್ರದರ್ಶನ ನ.13 ರಂದು ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಮಂಜುನಾಥ್ ರವರು ವಿದ್ಯಾರ್ಥಿಗಳ ಈ ಪ್ರತಿಭೆ ಹೆಮ್ಮರವಾಗಿ ಬೆಳೆದು ಮುಂದೆ ಉತ್ತಮ ಸಂಶೋಧಕರಾಗಿ ಮೂಡಿ ಬನ್ನಿ ಎಂದು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಪೂರ್ಣಿಮಾರವರು ವಿದ್ಯಾರ್ಥಿಗಳ ಆಲೋಚನಾ ಪ್ರವೃತ್ತಿ ಹೆಚ್ಚಿಸುವ ಇಂತಹ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚು ಹೆಚ್ಚು ಮೂಡಿ ಬರಲಿ ಎಂದು ಶುಭ ಹಾರೈಸಿದರು. ಮಾರ್ಗದರ್ಶಿ ಶಿಕ್ಷಕಿ ಸವಿತಾ ಹಿರಿಯ ಶಿಕ್ಷಕಿ ಮಾಲಿನಿ ಹೆಗಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರಾವ್ಯ ಸ್ವಾಗತಿಸಿದರು. ಮುಕ್ಷಿತಾ ನಿರೂಪಿಸಿ ಅಂಕಿತಾ ಧನ್ಯವಾದವಿತ್ತರು. ಶಿಕ್ಷಕಿಯರಾದ ಹೇಮಲತಾ ಪ್ರೇಮಲತಾ ಸಾವಿತ್ರಿ ಸಿ. ಡಿˌ ವಸಂತಿ ಎಂ ಸುಧೀಂದ್ರ ಸಹಕರಿಸಿದರು.

Related posts

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!