April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ನ. 14) ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಯುವರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕನ್ನಡಿಗರ ಇತಿಹಾಸ, ಸದ್ಗುಣ ಹಾಗೂ ಕೊಡುಗೆಗಳನ್ನು ಶ್ಲಾಘಿಸಿದರು.


ಮಾತೃಭಾಷೆ ಕನ್ನಡವನ್ನು ಉಳಿಸಿ ಬೆಳೆಸಿ, ಯುವ ಬರಹಗಾರರಾಗಲು, ಸ್ವಭಾಷೆಯನ್ನು ಬೆಳೆಸಿ, ಅನ್ಯ ಭಾಷೆಯನ್ನು ಗೌರವಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಾಲೆಯ ಕಿಂಡರ್ಗಾರ್ಟನ್ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶಿಕ್ಷಕ ಶ್ರೇಯಾಂಸ್ ಜೈನ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿಯರಾದ ನಿಧಿ ಸ್ವಾಗತಿಸಿ, ಸಂಜನಾ ವಂದಿಸಿ, ಪರಿಣಿತ ಕಾರ್ಯಕ್ರಮ ನಿರೂಪಿಸಿದರು.

Related posts

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!