April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ಈ ಸಾಲಿನಲ್ಲಿ ಸುಮಾರು ರೂ. 605 ಕೋಟಿಗೂ ಹೆಚ್ಚು ಲಾಭಾಂಶವನ್ನು ಅರ್ಹ ಸ್ವಸಹಾಯ ಸಂಘಗಳ ಸದಸ್ಯರಿಗೆ ವಿತರಿಸುವ ಐತಿಹಾಸಿಕ ಕಾರ್ಯಕ್ರಮ ನ.14ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಜರುಗಿತು.

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ನಬಾರ್ಡ್ ಅಧ್ಯಕ್ಷ ಶಾಜಿ ಕೆ.ವಿ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.


ವೇದಿಕೆಯಲ್ಲಿ ಜ್ಞಾನ ವಿಕಾಸ ಕಾಯ೯ಕ್ರಮದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಧನ್ಯ ಶ್ರೀ ಸಂಘ ಬೆಳ್ತಂಗಡಿ, ಶ್ರೀ ನಿಧಿ ಸಂಘ ಕುಂದಾಪುರ, ಶ್ರೀ ಶಂಕರ ಸಂಘ ಹೊಸಪೇಟೆ, ಅಪೂರ್ವ ಸಂಘ ಆನೇಕಲ್, ಅಹಮದ್ ಸಂಘ ಖಾನಾಪುರ, ರೋಶನ್ ಸಂಘ ಹಾಸನ ಇವರಿಗೆ ಸಾಂಕೇತಿಕವಾಗಿ ಸಚಿವರು ಲಾಭಾಂಶ ವಿತರಿಸಿದರು.
ಕಾರ್ಯಕ್ರಮದಲ್ಲಿ ಡಿ.ಸುರೇಂದ್ರ ಕುಮಾರ್, ಸುಪ್ರಿಯ ಹರ್ಷೇಂದ್ರ ಕುಮಾರ್, ಪೂರಣ್ ವಮ೯, ಸೋನಿಯಾ ವಮ೯, ಅಭಯಚಂದ್ರ ಜೈನ್ ಸೇರಿದಂತೆ ಯೋಜನೆಯ ಅಧಿಕಾರಿಗಳು, ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.
ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ್ ಪೈ, ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ, ದುಗ್ಗೇ ಗೌಡ, ವಿವೇಕ್ ವಿನ್ಸೆಂಟ್ ಪಾಯಸ್ ಸಚಿವರು ಹಾಗೂ ಅತಿಥಿಗಳನ್ನು ಗೌರವಿಸಿದರು.

ನಿನಾದ ಸಂಗೀತ ಶಾಲೆ ಧಮ೯ಸ್ಥಳದ ಸಾನ್ವಿ, ಇಷ್ಟ, ಶ್ರಾವಣಿ ಇವರ ಪ್ರಾಥ೯ನೆ ಬಳಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮುದಾಯ ಅಭಿವೃದ್ಧಿ ಪ್ರಾದೇಶಿಕ ನಿರ್ದೇಶಕ ಆನಂದ್ ಸುವರ್ಣ ಧನ್ಯವಾದ ವಿತ್ತರು.

Related posts

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya
error: Content is protected !!