32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ ಸ್ವಚ್ಛ ಭಾರತ – ಸ್ವಚ್ಛ ಕಿಲ್ಲೂರು ಅಭಿಯಾನ ಅಂಗವಾಗಿ ವಿದ್ಯಾರ್ಥಿ ಸ್ವಯಂ ಸೇವಕರು ಕಿಲ್ಲೂರು ಪರಿಸರದ ಸ್ವಚ್ಛತೆ ಮಾಡಿದರು.


ಮಿತ್ತಬಾಗಿಲು ಗ್ರಾಮ ಪಂಚಾಯತ್ ಇದರ ಗ್ರಾಮಾಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಅವರು ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಹೆಚ್.ಕೆ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ರಜಿಯಾ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ,
ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ರಾ. ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಆದಿತ್ಯ ವಿ ಹಾಗೂ ಪ್ರಾಪ್ತಿ ಗೌಡ ಮತ್ತು ವಿದ್ಯಾರ್ಥಿ ಸ್ವಯಂ ಸೇವಕರು ಉಪಸ್ಥಿತರಿದ್ದರು.

Related posts

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!