September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ ಸ್ವಚ್ಛ ಭಾರತ – ಸ್ವಚ್ಛ ಕಿಲ್ಲೂರು ಅಭಿಯಾನ ಅಂಗವಾಗಿ ವಿದ್ಯಾರ್ಥಿ ಸ್ವಯಂ ಸೇವಕರು ಕಿಲ್ಲೂರು ಪರಿಸರದ ಸ್ವಚ್ಛತೆ ಮಾಡಿದರು.


ಮಿತ್ತಬಾಗಿಲು ಗ್ರಾಮ ಪಂಚಾಯತ್ ಇದರ ಗ್ರಾಮಾಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಅವರು ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಹೆಚ್.ಕೆ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ರಜಿಯಾ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ,
ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ರಾ. ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಆದಿತ್ಯ ವಿ ಹಾಗೂ ಪ್ರಾಪ್ತಿ ಗೌಡ ಮತ್ತು ವಿದ್ಯಾರ್ಥಿ ಸ್ವಯಂ ಸೇವಕರು ಉಪಸ್ಥಿತರಿದ್ದರು.

Related posts

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya
error: Content is protected !!