March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪದ್ಮುಂಜ : ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಶ್ರೀಮತಿ ಸುಮತಿ ಪಿ.ಎನ್ ವಹಿಸಿದ್ದರು. ಬಹುಮಾನ ವಿತರಣೆ ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ಸುಧಾಮಣಿ ಬಿ ಮತ್ತು ಶ್ರೀಮತಿ ಸವಿತಾ ನಡೆಸಿಕೊಟ್ಟರು.

ದೈಹಿಕ ಶಿಕ್ಷಣ ಶಿಕ್ಷಕರಾದ ವಿನಯ್ ಕುಮಾರ್ ಇಂಗ್ಲಿಷ್ ಶಿಕ್ಷಕರಾದ ಅನಂತ ಕೃಷ್ಣ ಮತ್ತು ಕನ್ನಡ ಶಿಕ್ಷಕ ಆನಂದ್ ಆಟೋಟಗಳನ್ನು ನಡೆಸಿಕೊಟ್ಟರು. ಶಿಕ್ಷಕಿ ಶ್ರೀಮತಿ ಗಾಯತ್ರಿ, ಶ್ರೀಮತಿ ಸಂಧ್ಯಾ ಸಹಕರಿಸಿದರು.

Related posts

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya
error: Content is protected !!