24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪದ್ಮುಂಜ : ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಶ್ರೀಮತಿ ಸುಮತಿ ಪಿ.ಎನ್ ವಹಿಸಿದ್ದರು. ಬಹುಮಾನ ವಿತರಣೆ ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ಸುಧಾಮಣಿ ಬಿ ಮತ್ತು ಶ್ರೀಮತಿ ಸವಿತಾ ನಡೆಸಿಕೊಟ್ಟರು.

ದೈಹಿಕ ಶಿಕ್ಷಣ ಶಿಕ್ಷಕರಾದ ವಿನಯ್ ಕುಮಾರ್ ಇಂಗ್ಲಿಷ್ ಶಿಕ್ಷಕರಾದ ಅನಂತ ಕೃಷ್ಣ ಮತ್ತು ಕನ್ನಡ ಶಿಕ್ಷಕ ಆನಂದ್ ಆಟೋಟಗಳನ್ನು ನಡೆಸಿಕೊಟ್ಟರು. ಶಿಕ್ಷಕಿ ಶ್ರೀಮತಿ ಗಾಯತ್ರಿ, ಶ್ರೀಮತಿ ಸಂಧ್ಯಾ ಸಹಕರಿಸಿದರು.

Related posts

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya
error: Content is protected !!