25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಉಜಿರೆ. ನ. 14: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಜರಗಿತು.

ಕ್ರೀಡಾಕೂಟವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಿ. ಲಕ್ಷ್ಮಣಗೌಡ ಉದ್ಘಾಟಿಸಿ ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಮೂಡುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯಕವಾಗಿದೆ ಎಂದು ತಿಳಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಭವಾನಿ ಮಾರ್ಪಾಲು ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕಣಿಕ್ಕಿಲ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕ್ರೀಡಾ ಮಂತ್ರಿ ಕುಮಾರಿ ತೃಪ್ತಿ ಇವರು ಪ್ರತಿಜ್ಞಾ ವಿಧಿ ಬೋಧಿಸಿದರು.

ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ಸ್ವಾಗತಿಸಿದರು. ಶಿಕ್ಷಕಿ ಕುಮಾರಿ ಶ್ರೇಯಾಶ್ರೀ ವಂದಿಸಿದರು. ಶಿಕ್ಷಕ ಸುಮನ್ ಯು. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎ.17 ರಂದು ಹರೀಶ್‌ ಪೂಂಜ ನಾಮಪತ್ರ ಸಲ್ಲಿಕೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya
error: Content is protected !!