September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಮಾರ್ಗದರ್ಶನದಲ್ಲಿ ಶಾಲೆಯ ಪುಟಾಣಿ ಮಕ್ಕಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜವಾಹರಲಾಲ್ ನೆಹರು ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದ ಬಳಿಕ ಶಿಕ್ಷಕ ವೃಂದದಿಂದ ಹಾಗೂ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಮನೋರಂಜನೆಯನ್ನು ನೀಡಲಾಯಿತು.

ಬಹುಮಾನ ವಿತರಣಾ ಸಮಾರಂಭದ ವೇದಿಕೆಯ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಅಧ್ಯಕ್ಷ ಜನಾಬ್ ಸೈಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಸೈಯದ್ ಅಯ್ಯುಬ್ ಮಾತನಾಡಿ ” ತಮ್ಮ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಬೇಕೆಂದು ಬಯಸಿದ ನೆಹರು ಇವರ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಬೇಕೆಂದರು. ಕೋಶಾಧಿಕಾರಿ ಸೈಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.

ಮಕ್ಕಳ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಶಾಲಾ ಸಹಶಿಕ್ಷಕಿ ಮಿಶ್ರಿಯ ಸ್ವಾಗತಿಸಿದರು. ಸಹ ಶಿಕ್ಷಕಿ ಶಮೀಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಸಲ್ಮಾ ಧನ್ಯವಾದವಿತ್ತರು.

Related posts

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಪದ್ಮುಂಜ ಹಾ.ಉ.ಸ‌. ಸಂಘದ ಮಾಜಿ ನಿರ್ದೇಶಕ ಪೂವನಿ ಗೌಡ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!