April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

ಬೆಳ್ತಂಗಡಿ : ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಧ್ಯಕ್ಷ ಮುಸ್ತಾಫ ಬಂಗೇರಕಟ್ಟೆ ನೇತೃತ್ವದಲ್ಲಿ ನ.15 ರಂದು ಕಲ್ಲೇರಿ ಜಂಕ್ಷನ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಕಣಿಯೂರು ಬ್ಲಾಕ್ ಅಧ್ಯಕ್ಷ ಮುಸ್ತಾಫ ಬಂಗೇರಕಟ್ಟೆ ಮಾತನಾಡಿ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಬಹಳಷ್ಟು ಅಪಘಾತಗಳು ಸಂಭವಿಸಿ, ಸಾಕಷ್ಟು ಸಾವು- ನೋವು ಸಂಭವಿಸಿದರೂ ಇನ್ನು ಈ ಕುರಿತಾಗಿ ಅಧಿಕಾರಿಗಳು ಸೂಕ್ತವಾದ ಕ್ರಮಕೈಗೊಂಡಿಲ್ಲ ಹಾಗೂ ಸರಿಯಾಗಿ ರಸ್ತೆ ದುರಸ್ತಿಯ ಕಾರ್ಯವೂ ನಡೆಸಿಲ್ಲ. ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ತಕ್ಷಣ ರಸ್ತೆ ದುರಸ್ಥಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಅಗ್ರಹಿಸಿದರು.

ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಮಾತನಾಡಿ, ವರ್ಷಗಳಿಂದ ಈ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ದಿನನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲಿ ಗುಂಡಿ ಬಿದ್ದಿದ್ದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಉದಾಹರಣೆಗಳಿವೆ. ಲೋಕೋಪಯೋಗಿ ಅಧಿಕಾರಿಗಳ ಗಮನಕ್ಕೆ ತಂದರು ಏನು ಪ್ರಯೋಜನವಾಗುತ್ತಿಲ್ಲ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.



ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ಮಾತನಾಡಿ ದಿನನಿತ್ಯ ಈ ಮಾರ್ಗದಲ್ಲಿ ಶಾಲಾ- ಕಾಲೇಜು ಮಕ್ಕಳು ಓಡಾಡುತ್ತಿದ್ದು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ತಣ್ಣೀರುಪಂಥ ಗ್ರಾಮ ಪಂಚಾಯತ್ ಗೆ ತೆರಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.

ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಪಂಚಾಯತ್ ಸದಸ್ಯರಾದ ಫೈಝಲ್ ಮೂರುಗೋಳಿ, ಅನ್ವರ್ ತೆಕ್ಕಾರು, ಬ್ಲಾಕ್ ನಾಯಕರುಗಳಾದ ನಝೀರ್ ಬಾಜಾರು, ಹನೀಫ್ ಟಿ. ಎಸ್, ಸಾದಿಕ್ ಕುದ್ರಡ್ಕ, ರಝಕ್ ಬಿ.ಎಂ, ನೌಶಾದ್ ಬಾಜಾರು, ಬ್ರಾಂಚ್ ಪದಾಧಿಕಾರಿಗಳು, ಕಾರ್ಯಕರ್ತರು, ನಾಗರೀಕರು ಪಾಲ್ಗೊಂಡಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya
error: Content is protected !!