24.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನ. 13 ರಂದು ಶ್ರೀ ರಾಮ ಶಿಶುಮಂದಿರದಲ್ಲಿ ಮೂರನೇ ವರ್ಷದ ಗೋಪೂಜೆ ,ಭಜನೆ, ತುಳಸಿ ಪೂಜೆ, ಹಣತೆಗಳ ದೀಪ ಪ್ರಜ್ವಲನೆ ಕಾರ್ಯಕ್ರಮ ನೆರವೇರಿತು.

ಶ್ರೀ ರಾಮ ಶಿಶುಮಂದಿರದ ಮಕ್ಕಳು, ಪೋಷಕರು , ಮಾತಾಜಿಯವರು, ಮಾತೃ ಮಂಡಳಿ ಹಾಗೂ ಜೈ ಶ್ರೀರಾಮ್ ಮಹಿಳಾ ಸಂಘ ಅಲೆಕ್ಕಿ- ಮುಗೇರಡ್ಕ್ ಇದರ ಸದಸ್ಯರು ಹಾಗೂ ಊರವರೆಲ್ಲಲರೂ ಸೇರಿ ಭಜನೆ, ತುಳಸಿ ಪೂಜೆ, ಗೋಪೂಜೆ, ಹಣತೆಗಳಿಗೆ ದೀಪ ಪ್ರಜ್ವಲನೆ ಜೊತೆಗೆ ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು.


ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಪ್ರಯೋಜಕತ್ವದಲ್ಲಿ ಅನ್ನದಾನದ ವ್ಯವಸ್ಥೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಟ್ರಸ್ಟ್ ನ ಪದಾಧಿಕಾರಿಗಳು ಮಾತಾಜಿಯವರು, ಪೋಷಕರು, ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya
error: Content is protected !!