23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿಗೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಸಮಾಜ ಸೇವಕ,ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಆಯ್ಕೆಯಾಗಿದ್ದಾರೆ.

ಜಿ.ಪಂ ಮಾಜಿ ಉಪಾಧ್ಯಕ್ಷ,ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಪುಂಜಾಲಕಟ್ಟೆಯಲ್ಲಿ ನ. 17 ರಂದು 40 ನೇ ವರ್ಷದ ಹೊನಲು ಬೆಳಕಿನ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಪಂದ್ಯಾವಳಿಯ ಸಭಾ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.

ಮೋಹನ್ ಕುಮಾರ್ ಅವರು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮುಖೇನಾ ನೂರಾರು ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಂಡಿದೆ.ಇಂತಹ ಅನನ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

Related posts

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!