ಉಜಿರೆ: ಎಸ್.ಡಿ.ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನಾಚರಣೆಯು ನ.16 ರಂದು ಉಜಿರೆ ಎಸ್.ಡಿ.ಎಂ ಇಂದ್ರಪ್ರಸ್ಥ ಆಡಿಟೋರಿಯಂ ನಲ್ಲಿ ನಡೆಯಿತು.
ಕರ್ನಾಟಕ ಹೈ ಕೋರ್ಟ್ ನ್ಯಾಯಾದೀಶರಾದ ರಾಜೇಶ್ ರೈ ಕಲ್ಲಂಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ಮೂಲಭೂತ ಕರ್ತವ್ಯವನ್ನು ತಿಳಿದುಕೊಳ್ಳುವಂತಹದ್ದು ಮತ್ತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತಹದ್ದು ಪ್ರಕೃತ ಸಮಾಜಕ್ಕೆ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲ ಡಾ. ಕುಮಾರ್ ಹೆಗ್ಡೆ ಬಿ.ಎ. ವಹಿಸಿದ್ದರು.
ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶಚಂದ್ರ ಎಸ್., ಅಧಿವಕ್ತ ಪರಿಷದ್ ದಕ್ಷಿಣ ಪ್ರಾಂತ್ಯದ ಅಧ್ಯಕ್ಷ ಗುರುಪ್ರಸಾದ್ ಶೆಟ್ಟಿ, ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಪುಷ್ಪಲತಾ ಯು.ಕೆ ಉಪಸ್ಥಿತರಿದ್ದರು.
ಹಿರಿಯ ವಕೀಲ ಧನಂಜಯ್ ರಾವ್ ನಿರೂಪಿಸಿದರು. ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಸ್ವಾಗತಿಸಿ, ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕದ ಕಾರ್ಯದರ್ಶಿ ಶ್ಯಾಮ್ ಪ್ರಸಾದ್ ಕೈಲರ್ ವಂದಿಸಿದರು.