24.3 C
ಪುತ್ತೂರು, ಬೆಳ್ತಂಗಡಿ
May 20, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಪ್ರಯುಕ್ತ ವಾರ್ಷಿಕ ಕ್ರೀಡಾಕೂಟವನ್ನು ನ.16 ರಂದು ಹಮ್ಮಿಕೊಳ್ಳಲಾಯಿತು.


ಕ್ರೀಡಾಕೂಟವನ್ನು ಮುಂಡಾಜೆಯ ಯಂಗ್ ಚಾಲೆಂಜರ್ಸ್ ನ ಸ್ಥಾಪಕ ಅಧ್ಯಕ್ಷ ನಾಮದೇವ್ ಮುಂಡಾಜೆ ರವರು ಕ್ರೀಡಾ ಧ್ವಜಾರೋಹಣ ನೆರವೇರಿಸುವುದರ ಮೂಲಕ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೈರ್ಯ, ಮನೋ ಧೈರ್ಯ, ಶಾರೀರಿಕ ಬೆಳವಣಿಗೆ ಉತ್ತಮಗೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಇಂತಹ ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆ ಅನಾವರಣಗೊಳ್ಳಲು ಸಹಕಾರಿ ಇದ್ದಂತೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕ್ರೀಡಾಕೂಟದಲ್ಲಿ ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಸುಜಾತಾ ಧನ್ಯವಾದವಿತ್ತರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ಎನ್ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya
error: Content is protected !!