24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆ ಇದರ 2024-29ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್ ಸ್ಥಾನ ಸ್ಥಾನಕ್ಕೆ ನ.೧೬ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯರಾಜ ಜೈನ್,ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ಸದಸ್ಯರಾಗಿ ಪ್ರದೀಪ್ ಅವರು ಚುನಾಯಿತರಾಗಿದ್ದಾರೆ.

ಬಹಳಷ್ಟು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ ಈ ಚುನಾವಣೆಯಲ್ಲಿ 22ಮಂದಿ ನಿರ್ದೇಶಕರು ಮತದಾನ ಮಾಡಿದ್ದರು. ಸಂಜೆ ಮತದಾನದ ಬಳಿಕ ಮತ ಏಣಿಕೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಾಲಿ ಅಧ್ಯಕ್ಷ ಜಯರಾಜ್ ಜೈನ್ 17 ಮತಗಳನ್ನು ಪಡೆದು ಚುನಾಯಿತರಾದರು. ಅವರ ಪ್ರತಿಸ್ಪರ್ಧಿ ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳಂಜ ಅವರಿಗೆ 7 ಮತ ದೊರಕಿ ಅವರು ಸೋಲು ಅನುಭವಿಸಿದರು. ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಲೋಕೋಪಯೋಗಿ ಇಲಾಖೆಯ ನಾರಾಯಣ ಶೆಟ್ಟಿ 17 ಮತ ಪಡೆದು ಆಯ್ಕೆಯಾದರೆ ಅವರ ಎದುರಾಳಿ, ಪಶುವೈದ್ಯ ಇಲಾಖೆಯ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಸದಾಶಿವ ಭಟ್ ಕೆ. 5 ಮತ ಪಡೆದು ಸೋಲುಂಡರು.


ರಾಜ್ಯ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್ ಕುಮಾರ್ ಸಿ. 8 ಮತ ಪಡೆದು ಆಯ್ಕೆಯಾಗಿದ್ದಾರೆ. ಇವರ ಪ್ರತಿಸ್ಪರ್ಧಿ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಆನಂದ ಡಿ. 7 ಮತ ಮತ್ತು ಆರೋಗ್ಯ ಇಲಾಖೆಯ ಸೋಮನಾಥ ಎಂ.ಆರ್ 7 ಮತ ಪಡೆದು ಸೋಲುಂಡರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಾರಾಯಣ ನಾಯ್ಕ ಅವರು ಕಾರ್ಯನಿರ್ವಹಿಸಿದ್ದರು.

Related posts

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya
error: Content is protected !!