September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿಗೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಸಮಾಜ ಸೇವಕ,ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಆಯ್ಕೆಯಾಗಿದ್ದಾರೆ.

ಜಿ.ಪಂ ಮಾಜಿ ಉಪಾಧ್ಯಕ್ಷ,ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಪುಂಜಾಲಕಟ್ಟೆಯಲ್ಲಿ ನ. 17 ರಂದು 40 ನೇ ವರ್ಷದ ಹೊನಲು ಬೆಳಕಿನ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಪಂದ್ಯಾವಳಿಯ ಸಭಾ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.

ಮೋಹನ್ ಕುಮಾರ್ ಅವರು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮುಖೇನಾ ನೂರಾರು ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಂಡಿದೆ.ಇಂತಹ ಅನನ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

Related posts

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya
error: Content is protected !!