25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ನ.15 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾಯಿತು. ಸಹಶಿಕ್ಷಕಿಯಾದ ಶ್ರೀಮತಿ ಎಲಿಜಾ ಶಾಂತಿರವರು ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಡು, ನೃತ್ಯ, ನಾಟಕದ ಮೂಲಕ ಮಕ್ಕಳನ್ನು ಮನರಂಜಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸರವರು, ಹಾಗೂ ಶಿಕ್ಷಕರ-ರಕ್ಷಕ ಸಂಘದ ಸದಸ್ಯರಾದ ವಸಂತ ಮತ್ತು ಶ್ರೀಮತಿ ಡಯಾನ ಮಿಸ್ಕಿತ್ ರವರು ಉಪಸ್ಥಿತರಿದ್ದರು.

ಶಿಕ್ಷಕಿ ಶ್ರೀಮತಿ ವಿನ್ನಿ ಲೋಬೋ ನಿರೂಪಿಸಿ, ಶಿಕ್ಷಕಿ ಶ್ರೀಮತಿ ಜೋಯ್ಲಿನ್ ಲಿಡ್ವಿನ್ ಸೆರಾವೋ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಪ್ರಿನ್ಸಿಯ ಫೆರ್ನಾಂಡೀಸ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!