38.9 C
ಪುತ್ತೂರು, ಬೆಳ್ತಂಗಡಿ
April 4, 2025
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಉದಯ್ ಬಿ.ಕೆ ಬಂದಾರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನ ಪಡೆಯುವುದರ ಮೂಲಕ ಸಮಾಜ ಹಾಗೂ ದೇಶವನ್ನು ಕಟ್ಟುವ ಕೆಲಸವನ್ನು ಮಾಡಬೇಕು ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು.

ಕಣಿಯೂರು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದರಾದ ವಿಶ್ವನಾಥ್ ಮಲಿಂಗಲ್ಲು ಇವರ ಸಾಧನೆಯನ್ನ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಪಿಲಿಗೂಡು ವಹಿಸಿಕೊಂಡರು. ಅಶೋಕ್ ಬರಂಬು, ವಿಶ್ವನಾಥ್ ಮಲೆಂಗಲ್ಲು ಉಪಸ್ಥಿತರಿದ್ದರು. ಕುಮಾರಿ ಹರಿನಾಕ್ಷಿ ಸ್ವಾಗತಿಸಿದರು, ಕುಮಾರಿ ರಮ್ಯಾ ವಂದಿಸಿದರು, ಕುಮಾರಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!