September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

ಉಜಿರೆ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ನ. 17ರಂದು ಉಜಿರೆ ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರು ಉಪಸ್ಥಿತರಿದ್ದರು.

ಇತ್ತೀಚಿಗೆ ಅಗಲಿದ ಸಂಘದ ಸದಸ್ಯರಾದ ದಿ.ಸುಂದರ ಗೌಡ ಇಚ್ಚಿಲ ಮತ್ತು ಇಂದಿರಾ ಎಸ್.ಗೌಡ ಮಾಳಿಗೆಮನೆ ಇವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸುರೇಶ್ ಗೌಡ ಕೂಡಿಗೆ ಅವರ ಬಗ್ಗೆ ಮಾತನಾಡಿದರು.

ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಸಂಘದ ಅಭಿವೃದ್ಧಿಗೆ ತ್ಯಾಗ ಧನಸಹಾಯ ಬಹಳ ಮುಖ್ಯವಾಗಿರುತ್ತದೆ ಎಂದರು.

ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷರಾದ ಅನಿಲ್ ಗೌಡ ಅಂತರ, ಕಾಲಬೈರವೇಶ್ವರ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಣಾ ಧಿಕಾರಿ ದಿನೇಶ್ ಗೌಡ ಕಲ್ಲಾಜೆ ಉಪಸ್ಥಿತರಿದ್ದರು.

ಮಮತಾ ಶಿವರಾಮ ಗೌಡ ಮತ್ತು ಶ್ರೀಮತಿ ಭವ್ಯ ಸುರೇಂದ್ರ ಹುಂಕ್ರೋಟ್ಟು ಪ್ರಾರ್ಥನೆ ನೆರವೇರಿಸಿದರು. ಭರತ್ ಕುಮಾರ್ ಗೌಡ ಹಾನಿಬೆಟ್ಟು ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ವಾರ್ಷಿಕ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ರಾಘವೇಂದ್ರ ಗೌಡ ಪೊದುoಬಿಲ ಲೆಕ್ಕ ಪತ್ರ ಮಂಡಿಸಿದರು.‌ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ ಧನ್ಯವಾದವಿತ್ತರು. ಯುವ ವೇದಿಕೆ ಕಾರ್ಯದರ್ಶಿಯಾದ ಪ್ರಕಾಶ್ ಗೌಡ ಕೆದ್ಲ ಮತ್ತು ಗೀತಾ ಚಿದಾನಂದ ಗೌಡ ಬಡೆಕೊಟ್ಟು ನಿರೂಪಿಸಿದರು.

Related posts

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ದೇವಾಂಗ ಸಮಾಜದ ಪದಗ್ರಹಣ ಪ್ರತಿಭಾ ಪುರಸ್ಕಾರ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya
error: Content is protected !!