22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ: ಸಮಾಜವನ್ನು ಸನ್ಮಾರ್ಗದ ಕಡೆಗೆ ಕೊಂಡು ಹೋಗುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಯೋಜನೆಯ ಮೂಲಕ ಮಾಡುತ್ತಿದ್ದಾರೆ. ಯೋಜನೆಯಿಂದಾಗಿ ಇಂದು ಮಹತ್ತರ ಪರಿವರ್ತನೆಯಾಗಿದ್ದು ಕಟ್ಟಕಡೆಯ ಕುಟುಂಬವೂ ಮುಖ್ಯವಾಹಿನಿಗೆ ಬರುವಂತಾಗಿದೆ ಎಂದು ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೇ ಗೌಡ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಗುಂಪಿನ ಮೂಲಕ ಉಳಿತಾಯದ ಮನೋಭಾವನೆ ಬೆಳೆದಿದೆ, ಗುಂಪುಗಳು ಮಿನಿ ಬ್ಯಾಂಕ್ ಗಳಾಗಿ ಪರಿವರ್ತನೆಯಾಗಿದೆ. ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಯೋಜನೆಯು ಕೈ ಜೋಡಿಸಿದೆ. ಬಡವರನ್ನು ಗುರುತಿಸಿ ಅವರಿಗೆ ಆರ್ಥಿಕ ಚೈತನ್ಯ ನೀಡುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾಡುತ್ತಿದೆ ಎಂದವರು ಉದಾಹರಣೆ ಸಹಿತ ವಿವರಿಸಿದರು.

ರೈತ ಬಂಧು ಆಹಾರೋದ್ಯಮ ಪ್ರೈ. ಲಿ ಮಾರುತಿ ಪುರ ಮಾಲಕ ಶಿವ ಶಂಕರ್ ನಾಯಕ್ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ತಾಲೂಕಿನಲ್ಲಿ ಯೋಜನೆಯ ಆರಂಭದ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಸಿಕ್ಕಿದ ಪರಿಣಾಮ ರೈತರ ಅಭಿವೃದ್ಧಿ ಯೊಂದಿಗೆ ಗ್ರಾಮದ ಅಭಿವೃದ್ಧಿ ಯಾಗಿದೆ ಎಂದು ಸ್ಮರಿಸಿದರು.

ಅಧ್ಯಕ್ಷತೆಯನ್ನು ರಾಮಣ್ಣ ಗೌಡ ವಲಯ ಅದ್ಯಕ್ಷರು ತಣ್ಣೀರು ಪಂಥ ವಲಯ ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ, ಬಾವಂತಬೆಟ್ಟು ಕಲ್ಲೇರಿ ರಾಜೇಶ್ ಜೈನ್, ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ಕಲ್ಲೇರಿ ಲಿಂಗಪ್ಪ ನಾಯ್ಕ, ಶ್ರೀರಾಮ ಶಾಲೆ ಉಪ್ಪಿಂಗಡಿ ಅಧ್ಯಕ್ಷ ಸುನಿಲ್ ಅಣವು , ತಣ್ಣೀರುಪಂಥ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಕೃಷಿಕ ಪ್ರವೀಣ್ ರೈ ಕುಪ್ಪೆಟ್ಟಿ, ತಣ್ಣೀರುಪಂಥ ಗ್ರಾಮ ಪಂಚಾಯತ್ ಸದಸ್ಯ ಸಾಮ್ರಾಟ್ ಕರ್ಕೇರ, ಕಲ್ಲೇರಿ ಒಕ್ಕೂಟದ ನೂತನ ಅಧ್ಯಕ್ಷ ರವೀಂದ್ರ, ಕರಾಯ ಒಕ್ಕೂಟದ ನೂತನ ಅಧ್ಯಕ್ಷ ರಾಜಶೇಖರ ರೈ, ನಿಕಟ ಪೂರ್ವ ಅಧ್ಯಕ್ಷ ರಘರಾಮ ಶೆಟ್ಟಿ, ಕುಪ್ಪೆಟ್ಟಿ ಒಕ್ಕೂಟದ ನೂತನ ಅಧ್ಯಕ್ಷ ಡೀಕಯ್ಯ ಗೌಡ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಗುಣಕರ್ ನಿರೂಪಿಸಿದರು. ಕರಾಯ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸುಜಾತಾ ವರದಿ ಮಂಡಿಸಿದರು. ಸೇವಾ ಪ್ರತಿನಿಧಿಗಳಾದ ಸಂದ್ಯಾ, ವೇದಾವತಿ ಹಾಜರಿದ್ದರು.

Related posts

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya
error: Content is protected !!