ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪಿಲ್ಯ : ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಮೊದಲ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು.


ಹಳೆಯ ವಿದ್ಯಾರ್ಥಿ ತೇಜಸ್ ಪ್ರಸ್ತುತ ಶಾಲೆಯ ಶಿಕ್ಷಣ ಗುಣಮಟ್ಟ ಉನ್ನತ ದರ್ಜೆಯಲ್ಲಿದ್ದು, ಮತ್ತಷ್ಟು ಬೆಳವಣಿಗೆಗೆ ಪೂರಕವಾಗಿ ಅಭಿವೃದ್ಧಿ ಆಗಲು ಶಾಲೆಯಲ್ಲಿ ಶಿಕ್ಷಣ ಪಡೆದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದರು.


ಶಾಲಾ ಸಂಚಾಲಕ ನಸೀರ್ ಅಹಮದ್ ಖಾನ್ ಮಾತನಾಡಿ, ಶಾಲೆಯ ಹಿರಿಯ ವಿದ್ಯಾರ್ಥಿಗಳ ನಿರಂತರ ಸಹಕಾರ ಮತ್ತು ಶ್ರಮವನ್ನು ಸ್ಮರಿಸಿ ಅಭಿನಂದಿಸಿದರು. ಹಾಗೆಯೇ ಈ ವರ್ಷ ನಡೆಯುವ ಶಾಲಾ ರಜತ ಮಹೋತ್ಸವಕ್ಕೆ ಸಹಕಾರ ನೀಡುವಂತೆ ಕೇಳಿಕೊಂಡರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಾಜಿ ಕುರಿಯನ್ ನಿಮ್ಮ ಸಹಕಾರ ನಮಗೆ ಅಗತ್ಯ ರಜತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸೋಣ ಎಂದರು.


ಶಾಲಾ ಹಳೆಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಡಾ| ಸೌಪರ್ಣಿಕಾ, ಉಪಾಧ್ಯಕ್ಷರಾಗಿ ನಿರೀಕ್ಷಾ ಸಿ.ಎ ಹಾಗೂ ಸಂಜನ್ , ಕಾರ್ಯದರ್ಶಿಯಾಗಿ ಪ್ರಜ್ವಲ್, ಜತೆ ಕಾರ್ಯದರ್ಶಿಯಾಗಿ ನಿತೀನ್ , ಕೋಶಾಧಿಕಾರಿಯಾಗಿ ಯಜ್ಞೇಶ್ , ಜ್ಞಾನ , ಮಹಾವೀರ್ ಸಾಂಸ್ಕೃತಿಕ ಕಾರ್ಯದರ್ಶಿ ತೇಜಸ್ ಹಾಗೂ ಭೂಮಿಕಾ ಆಯ್ಕೆಯಾಗಿರುತ್ತಾರೆ.


ಸಭೆಯಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ವೀರೇಂದ್ರ ಜೈನ್ ಹಾಗೂ ಶ್ರೀಮತಿ ಹರಿಣಾಕ್ಷಿ, ಸದಸ್ಯ ಧನಕೀರ್ತಿ ಜೈನ್, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ಪೈಝೂನ್ ನಿರೂಪಿಸಿದರು.

Related posts

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಸ್ಪರ್ಧೆ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!