ಬೆಳಾಲು: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು, ಬೆಂಗಳೂರು. ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ, ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಇಂದುಮತಿ ಹಣ್ಣು, ತರಕಾರಿ, ಧಾನ್ಯಗಳ ಸಂರಕ್ಷಣಾ ವಿಧಾನಗಳಲ್ಲಿ ಪ್ರಗತಿ ಈ ವಿಷಯದಲ್ಲಿ ರಚಿಸಿದ ಪ್ರಬಂಧಕ್ಕೆ ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಈ ಪ್ರಬಂಧದ ಪ್ರಕಟಣೆಯು ನ. 27ರಂದು ಕಣಾದ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ ಪ್ರಕಟಿಸಲಾಗುತ್ತದೆ ಎಂದು ಸಂಘಟಕರು ತಿಳಿಸಿರುವುದಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.