September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

ಬೆಳ್ತಂಗಡಿ : ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನ.18 ರಂದು ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮುತ್ತಪ್ಪ ರೈ ಮೃತಪಟ್ಟ ಬಳಿಕ ಎರಡನೇ ಪತ್ನಿ ಮತ್ತು ಮಕ್ಕಳ ವಿರುದ್ಧ ಆಸ್ತಿ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು‌. ವರ್ಷಗಳ ಬಳಿಕ ವಕೀಲ ನಾರಾಯಣ ಸ್ವಾಮಿ ಮಧ್ಯಸ್ಥಿಕೆ ನಡೆಸಿ ಎರಡನೇ ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ಆಸ್ತಿ ವಿಚಾರದಲ್ಲಿ ಎರಡನೇ ಪತ್ನಿಗೆ ಸುಮಾರು 100 ಕೋಟಿ ರೂಪಾಯಿ ಪಾಲು ಮಾಡಿಸಿ ಕೋರ್ಟ್ ಪ್ರಕರಣ ರಾಜಿಯಲ್ಲಿ ಮುಗಿಸಿದ್ದರು. ಈ ಬಳಿಕ ನಾರಾಯಣ ಸ್ವಾಮಿ ಮತ್ತಿತರರು ಧರ್ಮಸ್ಥಳ , ಕುಕ್ಕೆ ಸುಬ್ರಮಣ್ಯ, ಸೌತಡ್ಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.

ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಖ್ಯಾತ ವಕೀಲ ನಾರಾಯಣ್ ಸ್ವಾಮಿ ಜೊತೆಯಲ್ಲಿ ಶಿವಣ್ಣ , ಶೇಷ ಕುಮಾರ್, ನಿರಂಜನ್, ಮಂಜುನಾಥ್ ಹಾಗೂ ಚಾಲಕ ಯಾಶೀನ್ ಭಾಗಿಯಾಗಿದ್ದರು.

Related posts

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ – ಭಾರತ ಮತ್ತು ಜಪಾನ್

Suddi Udaya
error: Content is protected !!