April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ B ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ವಿಜಯ ಆರ್ ರವರ ಅಧ್ಯಕ್ಷತೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಮೃದ್ಧಿ ಬಿ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಅಶೋಕ್ ಕುಮಾರ್ ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಮೀನಾರವರು ಮಂಡಿಸಿದರು,
ಯೋಜನೆಯ ಕೃಷಿ ಅಧಿಕಾರಿಯಾದ ರಾಮಕುಮಾರ್ ಸಂಘಟನಾತ್ಮಕವಾಗಿ ಸಂಘವನ್ನು ಕಟ್ಟಿಕೊಂಡು ಒಕ್ಕೂಟದ ವ್ಯವಸ್ಥೆಗೆ ತಂದು ಸಂಘದ ಸಂಪೂರ್ಣ ಬೆಳವಣಿಗೆಗೆ ಒಕ್ಕೂಟವು ನಿರಂತರವಾಗಿ ಸಹಕಾರವನ್ನು ನೀಡಿ ಯೋಜನೆಯ ಎಲ್ಲ ಸೇವೆಗಳನ್ನು ಸದಸ್ಯರಿಗೆ ತಲುಪಿಸಲು ಒಕ್ಕೂಟವು ಯೋಜನೆಯ ಕೊಂಡಿಯಾಗಿ ಸಂಘಕ್ಕೆ ಸೇವೆಯನ್ನು ನೀಡುತ್ತಿದೆ ಎಂದರು.


ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸದಸ್ಯರಿಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.
ವಲಯ ಮೇಲ್ವಿಚಾರಕರು ಜನಾರ್ದನ್, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ, ನಿಕಟಪೂರ್ವ ಅಧ್ಯಕ್ಷರು ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ರವಿ ಎನ್ ಸ್ವಾಗತಿಸಿ, ವಸಂತ ವಂದಿಸಿದರು.

Related posts

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya
error: Content is protected !!